Clik here to view.

ಶ್ರೀನಗರ: ಜಮ್ಮುಕಾಶ್ಮೀರ ಜಿಲ್ಲಾ ಅಭಿವೃದ್ದಿ ಮಂಡಳಿಯ ನೂತನ ಸದಸ್ಯರ ಪ್ರಮಾಣವಚನ ಕಾರ್ಯಕ್ರಮದಲ್ಲಿ ನಾಲ್ವರು ಸದಸ್ಯರು ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ಅಪರೂಪದ ಘಟನೆಗೆ ಸಾಕ್ಷಿಯಾಯಿತು.
ಜೊತೆಗೆ ಇದೇ ಮೊದಲ ಬಾರಿಗೆ ಚುನಾಯಿತ ಪ್ರತಿನಿಧಿಗಳು ಭಾರತದ ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಆಯಾ ಜಿಲ್ಲೆಗಳಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ಜಮ್ಮುವಿನ 140 ಹಾಗೂ ಕಾಶ್ಮೀರದ 137 ಜನಪ್ರತಿನಿಧಿಗಳು ಸೇರಿದಂತೆ ಒಟ್ಟು 277 ಮಂದಿ ಪ್ರಮಾಣವಚನ ಸ್ವೀಕರಿಸಿದರು. ಯಾವುದೇ ಪ್ರತಿನಿಧಿ ಜಮ್ಮುಕಾಶ್ಮೀರ ಸಂವಿಧಾನವನ್ನು ಉಲ್ಲೇಖಿಸಲಿಲ್ಲ. ಕೇವಲ ಭಾರತದ ಸಂವಿಧಾನವನ್ನು ಉಲ್ಲೇಖಿಸಿ ಪ್ರಮಾಣವಚನ ಸ್ವೀಕರಿಸಿರುವುದು ಜಮ್ಮು-ಕಾಶ್ಮೀರದ ಇತಿಹಾಸದಲ್ಲಿಯೇ ಅಪೂರ್ವ ಸಂಗತಿಯಾಗಿದೆ.
ಇತ್ತೀಚೆಗೆ ನಡೆದ ಜಮ್ಮುಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯಲ್ಲಿ ಬಿಜೆಪಿ 75 ಸ್ಥಾನಗಳನ್ನು ಹಾಗೂ 4.87ಲಕ್ಷ ಮತಗಳನ್ನು ಪಡೆದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 7 ಪಕ್ಷಗಳ ಗುಪ್ಕರ್ ಮೈತ್ರಿಕೂಟ 110 ಸ್ಥಾನಗಳನ್ನು ಗಳಿಸಿದರೂ 3.37 ಲಕ್ಷ ಮತಗಳನ್ನು ಮಾತ್ರ ಪಡೆದಿತ್ತು.280 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ 51.5% ಮತದಾನವಾಗಿತ್ತು. ಜಮ್ಮುಕಾಶ್ಮೀರದ ಜನತೆ ಭಾರತದ ಪ್ರಜಾಪ್ರಭುತ್ವವನ್ನು ಎತ್ತಿಹಿಡಿದಿದ್ದಾರೆ.
The post ಜಮ್ಮು-ಕಾಶ್ಮೀರ ಡಿಡಿಸಿಯ ನಾಲ್ವರು ಸದಸ್ಯರಿಂದ ಸಂಸ್ಕೃತದಲ್ಲಿ ಪ್ರಮಾಣವಚನ first appeared on Vishwa Samvada Kendra.