
ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ಜನವರಿ 21ನ್ನು ‘ದಾಸೋಹ ದಿನ’ವೆಂದು ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದರು.
ತುಮಕೂರಿನ ಸಿದ್ಧಗಂಗಾ ಮಠದಲ್ಲಿ ನಡೆದ ಶಿವಕುಮಾರ ಸ್ವಾಮೀಜಿ ಎರಡನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ
ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ಜ. 21 ಇನ್ನು ಪ್ರತೀ ವರ್ಷ ದಾಸೋಹ ದಿನ’ವನ್ನಾಗಿ ಆಚರಿಸಲಾಗುವುದು ಎಂದರು.
ಸ್ವಾಮೀಜಿ ಹುಟ್ಟೂರು ಮಾಗಡಿ ತಾಲ್ಲೂಕಿನ ವೀರಾಪುರದ ಅಭಿವೃದ್ಧಿಗೆ ₹ 80 ಕೋಟಿ ವೆಚ್ಚದ ಯೋಜನೆ ರೂಪಿಸಲಾಗಿದೆ. ಈಗಾಗಲೇ ₹ 25 ಕೋಟಿ ಬಿಡುಗಡೆ ಮಾಡಲಾಗಿದೆ. ಗ್ರಾಮದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದರು.
ಶಿವಕುಮಾರ ಸ್ವಾಮೀಜಿ ವಸ್ತು ಸಂಗ್ರಹಾಲಯ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಈ ವಸ್ತು ಸಂಗ್ರಹಾಲಯದ ನಿರ್ಮಾಣಕ್ಕೆ ಅಗತ್ಯ ನೆರವು ನೀಡಲಾಗುವುದು ಎಂದರು.