
ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಹಿರಿಯ ನ್ಯಾಯಮೂರ್ತಿ ಎನ್.ವಿ.ರಮಣ ಅವರ ಹೆಸರನ್ನು ಶಿಫಾರಸು ಮಾಡಿ ಸಿಜೆಐ ಎಸ್.ಎ. ಬೊಬ್ಡೆ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರದಿದ್ದಾರೆ.
ಪ್ರಸ್ತುತ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿರುವ ಎಸ್.ಎ. ಬೊಬ್ಡೆ ಅವರು ಏಪ್ರಿಲ್ 23 ರಂದು ನಿವೃತ್ತಿ ಹೊಂದಲಿದ್ದಾರೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ಗೆ ನೂತನ ಮುಖ್ಯ ನ್ಯಾಯಮೂರ್ತಿ ನೇಮಕಕ್ಕೆ ಶಿಫಾರಸು ಮಾಡಲಾಗಿದೆ.
ನ್ಯಾಯಮೂರ್ತಿ ಎನ್.ವಿ. ರಮಣ ಅವರ ಅಧಿಕಾರಾವಧಿ 2022 ರ ಆಗಸ್ಟ್ 26 ರವರೆಗೆ ಇರಲಿದೆ. ಕಾನೂನು ಸಚಿವ ರವಿಶಂಕರ್ ಪ್ರಸಾದ್ ಮಾ.19 ರಂದು ಸಿಜೆಇ ನ್ಯಾ.ಎಸ್ಎ ಬೋಬ್ಡೆಗೆ ಪತ್ರ ಬರೆದು ಮುಂದಿನ ಮುಖ್ಯ ನ್ಯಾಯಮೂರ್ತಿ ಹೆಸರನ್ನು ಶಿಫಾರಸನ್ನು ಮಾಡುವಂತೆ ಕೋರಿದ್ದರು.