
ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯದವರು ನಡೆಸುವ ಸಹಕಾರಿ ಸೊಸೈಟಿಗಳಲ್ಲಿ ಆಡಳಿತಾಧಿಕಾರಿಗಳನ್ನು ನೇಮಿಸುವ ಅಧಿಕಾರವನ್ನು ರಾಜ್ಯ ಸರ್ಕಾರದ ಸಹಕಾರ ಇಲಾಖೆಗೆ ನೀಡುವ ಕರ್ನಾಟಕ ಸೊಸೈಟಿಗಳ ನೋಂದಣಿ (ತಿದ್ದುಪಡಿ) ಮಸೂದೆ 2021ಕ್ಕೆ ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರ ಪಡೆದಿದೆ.
ಮಸೂದೆಯನ್ನು ಮಂಡಿಸಿ ಮಾತನಾಡಿದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು, ರಾಜ್ಯದಲ್ಲಿ 3.71 ಲಕ್ಷ ಸಹಕಾರ ಸೊಸೈಟಿಗಳಿವೆ, ಇದರಲ್ಲಿ 6,807 ಸೊಸೈಟಿಗಳನ್ನು ಅಲ್ಪಸಂಖ್ಯಾತರ ನಡೆಸುತ್ತಿದ್ದಾರೆ. ಈ ಮಸೂದೆಯಿಂದ ಸೊಸೈಟಿಗಳನ್ನು ನಿಯಂತ್ರಿಸುವುದು ಮಾತ್ರವಲ್ಲದೆ, ಸೊಸೈಟಿಗಳ ಸದಸ್ಯರು ಮತ್ತು ಸಾರ್ವಜನಿಕರ ಹಿತವನ್ನು ಕಾಪಾಡಲು ಸಾಧ್ಯವಾಗುತ್ತದೆ ಎಂದರು.
ಮಸೂದೆಯ ಬಗ್ಗೆ ಕಾಂಗ್ರೆಸ್ ಧರಣಿ ನಡೆಸುತ್ತಿದ್ದ ಚರ್ಚೆಯಲ್ಲಿ ಭಾಗವಹಿಸಲಿಲ್ಲ. ಜೆಡಿಎಸ್ ಚರ್ಚೆಗೆ ಸಿದ್ಧತೆ ನಡೆಸಿದ್ದರೂ ಕೂಡಾ ಗದ್ದಲದ ಕಾರಣ ಮಾತನಾಡಲು ಸಾಧ್ಯವಾಗಲಿಲ್ಲ. ಇದರಿಂದ ಬೇಸತ್ತ ಜೆಡಿಎಸ್ ಸದಸ್ಯರು ಸಭಾತ್ಯಾಗ ನಡೆಸಿದರು.
ವಿಧಾನಪರಿಷತ್ ನಲ್ಲಿ ಅಂಗೀಕಾರದ ಬಳಿಕ ಕಾನೂನು ಜಾರಿಗೆ ಬರಲಿದೆ.