
ದಕ್ವಿಣ ಭಾರತದ ಖ್ಯಾತ ನಟ ರಜನಿಕಾಂತ್ಗೆ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಘೋಷಿಸಿದೆ.
ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಪಡೆದ 51ನೇ ಚಲನಚಿತ್ರ ಕಲಾವಿದ ಎಂಬ ಹೆಗ್ಗಳಿಕೆಗೆ ರಜನಿಕಾಂತ್ ಪಾತ್ರರಾಗಿದ್ಧಾರೆ.
ಗಾಯಕಿ ಆಶಾ ಭೋಸ್ಲೆ, ನಿರ್ದೇಶಕ ಸುಭಾಷ್ ಘಾಯ್, ನಟ ಮೋಹನ್ ಲಾಲ್, ಸಂಗೀತ ಸಂಯೋಜಕ ಶಂಕರ್ ಮಹದೇವನ್ ಅವರು 2020ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿದ್ದರು.
2019ನೇ ಸಾಲಿನ 51ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ದಕ್ಷಿಣ ಭಾರತದ ಖ್ಯಾತ ನಟ, ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ನೀಡಲಾಗುತ್ತಿದೆ. ಅವರನ್ನು ಆಯ್ಕೆ ಮಾಡಿದ ಪ್ರಶಸ್ತಿ ಪುರಸ್ಕೃತರ ಆಯ್ಕೆ ತಂಡಕ್ಕೆ ನನ್ನ ಧನ್ಯವಾದಗಳು ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.
ಚಲನಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರವು ವಾರ್ಷಿಕ ಪ್ರಶಸ್ತಿಯಾಗಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡುತ್ತದೆ.