ಇಸ್ರೋ ವಿಜ್ಞಾನಿ ಡಾ. ನಂಬಿ ನಾರಾಯಣನ್ ಕಿರುಕುಳ ಪ್ರಕರಣ: ಸಿಬಿಐ ತನಿಖೆ ಹಾಗೂ ತಪ್ಪಿತಸ್ಥರನ್ನು ಗುರುತಿಸಿ ಕಾನೂನು ಕ್ರಮ ಜರಗಿಸುವಂತೆ ಸುಪ್ರೀಂ ಆದೇಶ
Clik here to view.

1994ರ ಬೇಹುಗಾರಿಗೆ ಪ್ರಕರಣ ಸಂಬಂಧ ಕಾನೂನು ಬಾಹಿರವಾಗಿ ಬಂಧನಕ್ಕೊಳಗಾಗಿದ್ದ ಇಸ್ರೋ ವಿಜ್ಞಾನಿ ಡಾ.ನಂಬಿ ನಾರಾಯಣನ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಸುಪ್ರೀ ಕೋರ್ಟ್ ಆದೇಶ ನೀಡಿದೆ.
ಜೊತೆಗೆ ಡಾ.ನಂಬಿ ನಾರಾಯಣನ್ ಅವರಿಗೆ ಕಿರುಕುಳ ನೀಡಿದವರನ್ನು ಗುರುತಿಸಿ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಸಿಬಿಐಗೆ ನಿರ್ದೇಶನ ನೀಡಿದೆ.
2018ರ ಸೆಪ್ಟೆಂಬರ್ 14ರಂದು ಸುಪ್ರೀಂ ಕೋರ್ಟ್ ನಂಬಿ ನಾರಾಯಣನ್ ಅವರ ಅಕ್ರಮ ಬಂಧನಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ನಿವೃತ್ತ ನ್ಯಾಯಾಧೀಶ ಡಿ ಕೆ ಜೈನ್ ನೇತೃತ್ವದ ಮೂವರು ಸದಸ್ಯರ ಸಮಿತಿ ರಚಿಸಿತ್ತು ಮತ್ತು ನಾರಾಯಣನ್ ಅವರಿಗೆ 50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕೇರಳ ಸರ್ಕಾರಕ್ಕೆ ಸೂಚಿಸಿತ್ತು.
ನ್ಯಾ. ಡಿ.ಕೆ. ಜೈನ್ ನೇತೃತ್ವದ ಮೂವರ ಉನ್ನತ ಮಟ್ಟದ ತನಿಖಾ ಸಮಿತಿ ಪ್ರಕರಣದ ಕುರಿತು ತನಿಖೆ ನಡೆಸಿ, ಮೊಹರು ಮಾಡಿದ ಕವರ್‌ನಲ್ಲಿ ತನ್ನ ವರದಿಯನ್ನು ಇತ್ತೀಚೆಗೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿತ್ತು.
ಈ ಉನ್ನತಮಟ್ಟದ ತನಿಖಾ ವರದಿಯನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್ ತನಿಖೆ ನಡಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.
ಪ್ರಕರಣದ ವಿವರ:
1994ರಲ್ಲಿ ಸ್ವದೇಶಿ ನಿರ್ಮಿತ ಕ್ರಯೋಜೆನಿಕ್ ಎಂಜಿನ್ ಸಿದ್ಧಪಡಿಸುತ್ತಿರುವ ಸಂದರ್ಭದಲ್ಲಿ, ಈ ತಂತ್ರಜ್ಞಾನವನ್ನು ನಂಬಿ ನಾರಾಯಣ್ ಅವರು ಶತ್ರು ರಾಷ್ಟ್ರಗಳಿಗೆ ಮಾರಾಟ ಮಾಡಲು ಷಡ್ಯಂತ್ರ ರೂಪಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಕೇರಳ ಪೊಲೀಸರು ನಂಬಿ ನಾರಾಯಣನ್ ಮತ್ತು ವಿಜ್ಞಾನಿ ಶಶಿಕುಮಾರ್, ಬೆಂಗಳೂರು ಮುಲದ ಉದ್ಯಮಿಗಳಾದ ಎಸ್.ಕೆ.ಶರ್ಮಾ ಮತ್ತು ಚಂದ್ರಶೇಖರ್ ಹೀಗೆ ಒಟ್ಟು ಆರು ಮಂದಿಯನ್ನು ಬಂಧನಕ್ಕೊಳಪಡಿಸಿದ್ದರು
50 ದಿನಗಳ ಕಾಲ ವಿಜ್ಞಾನಿ ನಂಬಿ ನಾರಾಯಣ ಅವರು ಜೈಲು ಶಿಕ್ಷೆ ಅನುಭವಿಸಿದ್ದರು. ಈ ಜೈಲು ಶಿಕ್ಷೆಯ ಸಂದರ್ಭದಲ್ಲಿ ಅವರಿಗೆ ವಿಪರೀತ ಚಿತ್ರಹಿಂಸೆ ನೀಡಲಾಗಿತ್ತು. ಈ ವೇಳೆ ಇಸ್ರೋದ ಹಲವಾರು ಯೋಜನೆಗಳೂ ಕೂಡ ನೆನೆಗುದಿಗೆ ಬಿದ್ದಿತ್ತಲ್ಲದೆ, ಇಸ್ರೋ ವಿಜ್ಞಾನಿಗಳ ನೈತಿಕ ಸ್ಥೈರ್ಯವೇ ಉಡುಗಿ ಹೋಗಿತ್ತು.