
ಉತ್ತರ ಪ್ರದೇಶ: ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಭವ್ಯ ದೇವಾಲಯದ ನಿರ್ಮಾಣಕ್ಕಾಗಿ ಮತ್ತು ಅಯೋಧ್ಯಾ ಪ್ರದೇಶದ ಅಭಿವೃದ್ಧಿಗೆ ಕೆಲಸ ಮಾಡುವ ಶ್ರೀರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್, ಕರೋನಾ ಸೋಂಕಿತ ರೋಗಿಗಳಿಗೆ ಸಹಾಯ ಮಾಡಲು ಮುಂದಾಗಿದೆ. 55 ಲಕ್ಷ ರೂ ವೆಚ್ಚದಲ್ಲಿ ಅಯೋಧ್ಯೆಯ ದಶರಥ ವೈದ್ಯಕೀಯ ಕಾಲೇಜಿನಲ್ಲಿ ಆಕ್ಸಿಜನ್ ಪ್ಲಾಂಟ್ ಸ್ಥಾಪಿಸುವುದಾಗಿ ಟ್ರಸ್ಟ್ ಘೋಷಿಸಿದೆ.
ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿ ಡಾ. ಅನಿಲ್ ಮಿಶ್ರಾ ಅವರು ಮಾತನಾಡಿ, ಪ್ರಸ್ತುತ, ಕರೋನಾದಿಂದ ಇಡೀ ದೇಶವು ತೊಂದರೆಗೀಡಾಗಿದೆ. ಇಂತಹ ಪರಿಸ್ಥಿತಿಯಲ್ಲಿ 55 ಲಕ್ಷ ರೂ.ಗಳ ಆಮ್ಲಜನಕ ಸ್ಥಾವರವನ್ನು ಸ್ಥಾಪಿಸಲು ಟ್ರಸ್ಟ್ ನಿರ್ಧರಿಸಿದೆ ಎಂದರು.