Quantcast
Channel: News – Vishwa Samvada Kendra
Viewing all articles
Browse latest Browse all 1745

ಯೋಗದಿನಾಚರಣೆ ಪ್ರಯುಕ್ತ ರಾಷ್ಟ್ರೋತ್ಥಾನ ಪರಿಷತ್ ನಿಂದ ಜೂನ್ 15ರಿಂದ ಅಂತರ್ಜಾಲ ಉಪನ್ಯಾಸ ಸರಣಿ

$
0
0

ಬೆಂಗಳೂರು, ಜೂನ್ 14: ರಾಷ್ಟ್ರೋತ್ಥಾನ ಪರಿಷತ್ ಅಂತಾರಾಷ್ಟ್ರೀಯ ಯೋಗದಿನಾಚರಣೆಯ ಪ್ರಯುಕ್ತ ಜೂನ್ 15ರಿಂದ 20ರ ತನಕ ಅಂತರ್ಜಾಲ  ಉಪನ್ಯಾಸ  ಸರಣಿಯನ್ನು ಆಯೋಜಿಸಿದೆ  ಎಂದು ರಾಷ್ಟ್ರೋತ್ಥಾನ ಯೋಗ ವಿಭಾಗದ ನಿರ್ದೇಶಕರಾದ ಎ. ನಾಗೇಂದ್ರ ಕಾಮತ್ ಅವರು ತಿಳಿಸಿದರು.

ಅಂತಾರಾಷ್ಟ್ರೀಯ ಯೋಗ ದಿನವನ್ನು ರಾಷ್ಟ್ರೋತ್ಥಾನ ಯೋಗವಿಜ್ಞಾನ ಮತ್ತು ಸಂಶೋಧನ ಸಂಸ್ಥೆಯ ವತಿಯಿಂದ ಪ್ರತಿ ವರ್ಷ ವಿಶಿಷ್ಟ ರೀತಿಯಲ್ಲಿ ಆಚರಿಸಲಾಗುತ್ತಿದೆ. ಈ ವರ್ಷ ಕೊರೋನಾ ಕಾರಣದಿಂದ ಆನ್‌ಲೈನ್ ಮೂಲಕ ಆಚರಿಸಲು ನಿರ್ಧರಿಸಲಾಗಿದೆ.

ಈ ಬಾರಿಯ 7ನೇ ಅಂತಾರಾಷ್ಟ್ರೀಯ ಯೋಗದಿನಾಚರಣೆಯ ಪ್ರಯುಕ್ತ ರಾಷ್ಟ್ರೋತ್ಥಾನ ಪರಿಷತ್ ’ಸ್ವಸ್ಥ-ಸುಸ್ಥಿರ ಸಮಾಜನಿರ್ಮಾಣಕ್ಕೆ ಯೋಗ’ ಎಂಬ ಅಭಿಯಾನ ಹಮ್ಮಿಕೊಂಡಿದೆ. ಈ ಅಭಿಯಾನದಲ್ಲಿ ವಿಶೇಷವಾಗಿ ಒಂದು ವಾರಗಳ ಕಾಲ, ಜೂನ್ 15 ರಿಂದ 20ರ ತನಕ ಯೋಗದ ವಿವಿಧ ಆಯಾಮವನ್ನು ಪರಿಚಯಿಸುವ ಅಂತರ್ಜಾಲ ಉಪನ್ಯಾಸ ಸರಣಿಯನ್ನು ಆಯೋಜಿಸಲಾಗಿದೆ.

ಈ ವೆಬಿನಾರ್ ಉಪನ್ಯಾಸದಲ್ಲಿ ರಾಷ್ಟ್ರ ಹಾಗೂ ರಾಜ್ಯಮಟ್ಟದ ವಿಷಯ ತಜ್ಞರು ಆಗಮಿಸಿ ಉಪನ್ಯಾಸ ನೀಡಲಿದ್ದಾರೆ. ಜೂನ್ 15 ರಿಂದ 20ರ ತನಕ ಪ್ರತಿ ದಿನ ಸಂಜೆ 6ಕ್ಕೆ ಉಪನ್ಯಾಸ ಕಾರ್ಯಕ್ರಮ ನಡೆಯಲಿದ್ದು, www.facebook.com/rashtrotthanaparishath ಫೇಸ್ ಬುಕ್ ನಲ್ಲಿ ನೇರಪ್ರಸಾರವಾಗಲಿದೆ.

ಕಾರ್ಯಕ್ರಮದ ವಿವರ ಹೀಗಿದೆ :

ಜೂನ್ 15, ಮಂಗಳವಾರ ವಿಯೇಟ್ನಾಂನ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಕೇಂದ್ರದ ನಿರ್ದೇಶಕರಾದ ಡಾ|| ಜಿ.ಬಿ. ಹರೀಶ್ ಅವರು ‘ಸಮಾಜ ಯೋಗ‘ ಎಂಬ ವಿಷಯದ ಕುರಿತಾಗಿ ಉಪನ್ಯಾಸ ನೀಡಲಿದ್ದಾರೆ.

ಜೂನ್ 16, ಬುಧವಾರ ಬೆಂಗಳೂರಿನ ರಾಮಕೃಷ್ಣ ಮಠದ ಶ್ರೀ ಸ್ವಾಮಿ ಮಂಗಳನಾಥಾನಂದಜೀ, ಅವರು ‘ಯೋಗ ಮತ್ತು ಆಧ್ಯಾತ್ಮ‘ ಎಂಬ ವಿಷಯದ ಕುರಿತಾಗಿ ಉಪನ್ಯಾಸ ನೀಡಲಿದ್ದಾರೆ.

ಜೂನ್ 17, ಗುರುವಾರ ವಿಭು ಅಕಾಡೆಮಿಯ ಮುಖ್ಯಸ್ಥರಾದ ಡಾ. ಆರತಿ ವಿ.ಬಿ. ಅವರು ’ವ್ಯಕ್ತಿತ್ವ ವಿಕಸನಕ್ಕೆ ಯೋಗ’ ಎಂಬ ವಿಷಯದ ಕುರಿತಾಗಿ ಕುರಿತಾಗಿ ಉಪನ್ಯಾಸ ನೀಡಲಿದ್ದಾರೆ.

ಜೂನ್ 18, ಶುಕ್ರವಾರ ಬೆಂಗಳೂರಿನ ಎಸ್-ವ್ಯಾಸ ವಿಶವಿದ್ಯಾಲಯದ ಸಹ ಉಪಕುಲಪತಿ ಹಾಗೂ ಸಂಶೋಧನಾ ನಿರ್ದೇಶಕರಾದ ಡಾ. ಮಂಜುನಾಥ್ ಎನ್.ಕೆ. ಅವರು ‘ಭಾವನೆಗಳ ಹಿಂದಿನ ವಿಜ್ಙಾನ‘ ಎಂಬ ವಿಷಯದ ಕುರಿತಾಗಿ ಉಪನ್ಯಾಸ ನೀಡಲಿದ್ದಾರೆ.

ಜೂನ್ 19, ಶನಿವಾರ ಎಸ್-ವ್ಯಾಸ ವಿಶ್ವವಿದ್ಯಾಲಯದ ’ಆರೋಗ್ಯಧಾಮ’ದ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಆರ್. ನಾಗರತ್ನ ಹಾಗೂ ಖ್ಯಾತ ಸ್ತ್ರೀರೋಗ ತಜ್ಞರು, ರಂಗದೊರೈ ಸ್ಮಾರಕ ಆಸ್ಪತ್ರೆಯ ಪ್ರಮುಖ ಸಲಹೆಗಾರರೂ ಆದ ಡಾ. ಲತಾ ವೆಂಕಟರಾiನ್ ಅವರು ‘ಮಹಿಳೆಯರ ಆರೋಗ್ಯಕ್ಕೆ ಯೋಗ‘ ಎಂಬ ವಿಷಯದ ಕುರಿತಾಗಿ ಉಪನ್ಯಾಸ ನೀಡಲಿದ್ದಾರೆ.

ಜೂನ್ 20, ಭಾನುವಾರ ರಾಷ್‌ಟರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿಣಿ ಸದಸ್ಯರಾದ ಶ್ರೀ ರಾಮ್ ಮಾದವ್ ಅವರು ‘ಜಾಗತಿಕ ಸ್ತರದಲ್ಲಿ ಯೋಗ ‘ಎಂಬ ವಿಷಯದ ಕುರಿತಾಗಿ ಉಪನ್ಯಾಸ ನೀಡಲಿದ್ದಾರೆ.

ಜೂನ್ 21ರಂದು ಬೆಳಗ್ಗೆ ಆನ್‌ಲೈನ್ ಮೂಲಕ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದ್ದು, ಖ್ಯಾತ ಆಯುರ್ವದ ತಜ್ಞರಾದ ಗಿರಿಧರ ಕಜೆ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ರಾಷ್ಟ್ರೋತ್ಥಾನ ಪರಿಷತ್ 1965ರಿಂದಲೂ ಶೈಕ್ಷಣಿಕ, ಸಾಂಸ್ಕೃತಿಕ, ಹಾಗೂ ಸೇವಾ ಚಟುವಟಿಕೆಗಳನ್ನು ನಿರಂತರ ನಡೆಸಿಕೊಂಡು ಬರುತ್ತಿದೆ. 1972 ರಿಂದ ಯೋಗ ಶಿಕ್ಷಣವನ್ನು ನೀಡುತ್ತಿದ್ದು, ಇದುವರೆಗೂ ಸುಮಾರು 1,00,000ಕ್ಕೂ ಹೆಚ್ಚು ಜನರಿಗೆ ಯೋಗ ಶಿಕ್ಷಣವನ್ನು ಪಡೆದಿದ್ದಾರೆ. ಪ್ರಸ್ತುತ ಬೆಂಗಳೂರಿನ ಹತ್ತು ಕೇಂದ್ರಗಳಲ್ಲಿ ಯೋಗ ಶಿಕ್ಷಣವನ್ನು ನೀಡಲಾಗುತ್ತಿದೆ ಎಂದು ನಾಗೇಂದ್ರ ಕಾಮತ್ ತಿಳಿಸಿದರು.


Viewing all articles
Browse latest Browse all 1745

Trending Articles



<script src="https://jsc.adskeeper.com/r/s/rssing.com.1596347.js" async> </script>